ಲಾರ್ಡ್ಸ: ಮೋಯಿನ್ ಅಲಿ ಹಾಗೂ ಡೇವಿಡ್ ವಿಲ್ಲಿ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಇಂಗ್ಲೆಂಡ್ ತಂಡವು ಭಾರತಕ್ಕೆ 247 ರನ್‌ಗಳ ಗುರಿ ನೀಡಿದ್ದಾರೆ.
ಲಾರ್ಡ್ಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು 49 ಓವರ್‌ಗಳಲ್ಲಿ 246 ರನ್‌ಗಳಿಗೆ ಆಲೌಟ್ ಆಯಿತು. ಲಾರ್ಡ್ಸ್‌ನಲ್ಲಿ ಭಾರತಕ್ಕೆ ಪಂದ್ಯ ಮತ್ತು ಸರಣಿ ಗೆಲ್ಲಲು 246 ರನ್‌ಗಳ ಅಗತ್ಯವಿದೆ.
ಇಂಗ್ಲೆಂಡ್ ಪರ ಮೋಯಿನ್ ಅಲಿ 47 ರನ್, ಡೇವಿಡ್ ವಿಲ್ಲಿ 41 ರನ್ ಹಾಗೂ ಜಾನಿ ಬೈರ್ಸ್ಟೋವ್ 38 ರನ್ ಗಳಿಸಿದರು. ಇನ್ನು ಯಜುವೇಂದ್ರ ಚಹಾಲ್ 4 ವಿಕೆಟ್ ಕಿತ್ತು ಮಿಂಚಿದರು. ಜಸ್‌ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಉರುಳಿಸಿದರೆ, ಮೊಹಮ್ಮದ್ ಶಮಿ ಮತ್ತು ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
PublicNext
14/07/2022 09:54 pm