ಮ್ಯಾಂಚೆಸ್ಟರ್: ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜಸ್‌ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇಂದು ಮ್ಯಾಂಚೆಸ್ಟರ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಮೂರು ಪಂದ್ಯಗಳ ಸರಣಿಯಲ್ಲಿ ಇದು ಕೊನೆಯ ಪಂದ್ಯವಾಗಿದೆ. ಸದ್ಯ ಎರಡೂ ತಂಡಗಳು 1-1ರಲ್ಲಿ ಸಮಬಲ ಸಾಧಿಸಿದ್ದು, ಇಂದು ಯಾವ ತಂಡ ಸರಣಿ ಗೆಲ್ಲಲಿದೆ ಎಂಬುದು ಕಾತರಿಯಾಗಲಿದೆ.
PublicNext
17/07/2022 03:33 pm