ಮ್ಯಾಂಚೆಸ್ಟರ್: ರಿಷಭ್ ಪಂತ್ ಅಜೇಯ ಶತಕ, ಹಾರ್ದಿಕ್ ಪಾಂಡ್ಯ ಅದ್ಭುತ ಆಲ್‌ರೌಂಡರ್ ಪ್ರದರ್ಶನದಿಂದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಈ ಮೂಲಕ 2-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.
ಮ್ಯಾಂಚೆಸ್ಟರ್‌ನಲ್ಲಿ ಇಂದು ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಜೋಸ್ ಬಟ್ಲರ್ 60 ರನ್, ಜೇಸನ್ ರಾಯ್ 41, ಮೊಯಿನ್ ಅಲಿ 34 ಹಾಗೂ ಕ್ರೇಗ್ ಓವರ್ಟನ್ 32 ರನ್ ಸಹಾಯದಿಂದ 45.5 ಓವರ್‌ಗಳಲ್ಲಿ 259 ಗಳಿಸಿ ಆಲ್‌ಔಟ್‌ಗೆ ತುತ್ತಾಗಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡವು 42.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 261 ರನ್ ಚಚ್ಚಿ ಗೆದ್ದು ಬೀಗಿದೆ. ಭಾರತದ ಪರ ರಿಷಭ್ ಪಂತ್ ಅಜೇಯ 125 ರನ್ ಹಾಗೂ ಹಾರ್ದಿಕ್ ಪಾಂಡ್ಯ 71 ರನ್ ಗಳಿಸಿದರು.
ಇದಕ್ಕೂ ಮುನ್ನ ಭಾರತದ ಪರ ಹಾರ್ದಿಕ್ ಪಾಂಡ್ಯ ಮಿಂಚಿನ ಬೌಲಿಂಗ್ ಪ್ರದರ್ಶನ ನೀಡಿದ್ದರು. ಅವರು 7 ಓವರ್ ಬೌಲಿಂಗ್ ಮಾಡಿ 24 ರನ್ ನೀಡಿ 3 ಮೆಡನ್ ಓವರ್ ಜೊತೆಗೆ 4 ವಿಕೆಟ್ ಉರುಳಿಸಿ ಮಿಂಚಿದ್ದರು. ಉಳಿದಂತೆ ಯಜುವೇಂದ್ರ ಚಹಾಲ್ 3 ವಿಕೆಟ್, ಮೊಹಮ್ಮದ್ ಸಿರಾಜ್ 2 ವಿಕೆಟ್ ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದುಕೊಂಡಿದ್ದರು.
PublicNext
17/07/2022 11:13 pm