ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದಲ್ಲಿ ನಡೆದ ಪ್ರಾಥಮಿಕ ಶಾಲಾ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಹರದಗಟ್ಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ವಿಭಾಗ , ಬಾಲಕರ ವಿಭಾಗದ ಕಬ್ಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಗ್ರಾಮಕ್ಕೆ, ಶಾಲೆಗೆ ಕೀರ್ತಿ ತಂದಿದ್ದಾರೆ.

ಕಬ್ಬಡ್ಡಿ ಪಂದ್ಯದಲ್ಲಿ ಅಷ್ಟೆ ಅಲ್ಲದೇ, ವಾಲಿಬಾಲ್ ಕ್ರೀಡೆಯಲ್ಲಿ ಬಾಲಕ, ಬಾಲಕಿಯರು ದ್ವೀತಿಯ ಸ್ಥಾನ, ಹಾಗೂ ಥ್ರೋ ಬಾಲ್ ಕ್ರೀಡೆಯಲ್ಲಿ ಬಾಲಕರು ದ್ವೀತಿಯ ಸ್ಥಾನ ಪಡೆದು ಮಿಂಚಿದ್ದಾರೆ.

ಶಾಲೆಯ ಹಾಗೂ ಗ್ರಾಮದ ಹೆಮ್ಮೆಗೆ ಪಾತ್ರರಾದ ವಿದ್ಯಾರ್ಥಿಗಳಿಗೆ ಉದ್ದೇಶಿಸಿ ಮಾತನಾಡಿದ ಶಾಲಾ ಸುಧಾರಣಾ ಸಮಿತಿ ಮಾಜಿ ಅಧ್ಯಕ್ಷ ಶಿಕ್ಷಕ ರಾಜು ನಾಯಕ ನಮ್ಮ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಪದಕಗಳನ್ನು ಪಡೆದು ನಮಗೆ ಹೆಮ್ಮೆ ತರುವಂತ ಕೆಲಸ ಮಾಡಿದ್ದಾರೆ. ಶಾಲೆಯ ದೈಹಿಕ ಶಿಕ್ಷಕರು ಅಲ್ಲದೇ ಸಹ ಶಿಕ್ಷಕರು ಮಕ್ಕಳಿಗೆ ಪಾಠದ ಜೊತೆಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವಂತಹ ಕೆಲಸ ಮಾಡಿದ್ದಾರೆ. ಹರದಗಟ್ಟಿ ಗ್ರಾಮದ ಶಾಲೆಯ ಮಕ್ಕಳು ಕ್ರೀಡೆಯಲ್ಲಿ ಅಷ್ಟೆ ಅಲ್ಲದೇ, ಸ್ಪರ್ಧಾತ್ಮಕ ಬರುವ ಎಲ್ಲ ರೀತಿಯ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿತ್ತಿರುವುದು ನಮಗೆ ಖುಷಿ ತಂದಿದೆ.

ವರದಿ.ಸುರೇಶ ಲಮಾಣಿ ಪಬ್ಲಿಕ್ ನೆಕ್ಸ್ಟ ಗದಗ

Edited By : Nagesh Gaonkar
PublicNext

PublicNext

23/07/2022 03:36 pm

Cinque Terre

29.22 K

Cinque Terre

0

ಸಂಬಂಧಿತ ಸುದ್ದಿ