ವೆಸ್ಟ್ ಇಂಡೀಸ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಈಗಾಗಲೇ ಹಿರಿಯ ಆಟಗಾರರು ವಿಶ್ರಾಂತಿ ಪಡೆದು ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ವಿಂಡೀಸ್ ಎದುರು ಕಣಕ್ಕಿಳಿದು ಮೊದಲ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ. ಇನ್ನು ಮಂಡಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ವಿಂಡೀಸ್ ಎದುರಿನ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.
ಇಂಜುರಿಯಿಂದ ಫಿಟ್ ಆಗಿದ್ದ ಜಡೇಜಾ, ಈಗ ಮತ್ತೆ ಇಂಜುರಿಗೆ ಒಳಗಾಗಿರೋದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಅದರಲ್ಲೂ ಟಿ20 ವಿಶ್ವಕಪ್ ಬಳಿಕ ಜಡ್ಡು ಗಾಯಕ್ಕೆ ತುತ್ತಾಗಿರೋದು 3ನೇ ಬಾರಿಗೆ.! ಆದ್ರಿದು ಜಡೇಜಾಗೆ ಸೀಮಿತವಾಗಿಲ್ಲ, ಪ್ರತಿಯೊಬ್ಬ ಆಟಗಾರನಿಗೂ ಈ ಸಮಸ್ಯೆ ಬಿಟ್ಟೂ ಬಿಡದೆ ಕಾಡ್ತಿದೆ. ಆದ್ರೆ ಆಟಗಾರರು ಪದೇ ಪದೇ ಇಂಜುರಿಗೆ ಒಳಗಾಗ್ತಿರೋದ್ಯಾಕೆ ಅಂತ ಸಾಕಷ್ಟು ಟೀಕೆಗೆ ಕಾರಣವಾಗಿತ್ತು. ಆದ್ರೀಗ ಅದಕ್ಕೆಲ್ಲಾ ಉತ್ತರ ಸಿಕ್ಕಿದೆ.
ಜಡೇಜಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಉಪನಾಯಕರಾಗಿ ನೇಮಕವಾಗಿದ್ದಾರೆ.
PublicNext
23/07/2022 05:01 pm