ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IND vs WI: ಅಕ್ಷರ್ ಆರ್ಭಟ- ವಿಂಡೀಸ್ ವಿರುದ್ಧದ ಏಕದಿನ ಸರಣಿ ಭಾರತದ ವಶ

ಕ್ವೀನ್ಸ್ ಪಾರ್ಕ್ ಓವಲ್: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಅರ್ಧ ಶತಕ ಸಹಾಯದಿಂದ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ 2-0 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಕ್ವೀನ್ಸ್ ಪಾರ್ಕ್ ಓವಲ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನಾಯಕ ನಿಕೋಲಸ್ ಪೂರನ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡವು ಸ್ಟಾರ್ ಓಪನರ್ ಶಾಯ್ ಹೋಪ್ ಅವರ ಸ್ಮರಣೀಯ ಶತಕದ ನೆರವಿನಿಂದ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿತ್ತು.

ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡವು 2 ಎಸೆತಗಳು ಬಾಕಿ ಇರುವಂತೆ 8 ವಿಕೆಟ್ ನಷ್ಟಕ್ಕೆ 312 ರನ್ ಗಳಿಸಿ ಗೆಲುವು ದಾಖಲಿಸಿತು. ತಂಡದ ಪರ ಅಕ್ಷರ್ ಪಟೇಲ್ ಅಜೇಯ 64 ರನ್ (35 ಎಸೆತ), ಶ್ರೇಯಸ್ ಅಯ್ಯರ್ 63 ರನ್ (71 ಎಸೆತ) ಹಾಗೂ ಸಂಜು ಸ್ಯಾಮ್ಸನ್ 54 ರನ್ ಗಳಿಸಿದರು.

Edited By : Vijay Kumar
PublicNext

PublicNext

25/07/2022 07:10 am

Cinque Terre

44.37 K

Cinque Terre

2

ಸಂಬಂಧಿತ ಸುದ್ದಿ