ನವದೆಹಲಿ: ಪ್ರಖ್ಯಾತ ಜಾವೆಲಿನ್ ಎಸೆತಗಾರ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಗಾಯದಿಂದಾಗಿ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಮನ್‌ವೆಲ್ತ್ ಗೇಮ್ಸ್ ಜುಲೈ 28ರಂದು ಪ್ರಾರಂಭವಾಗುತ್ತದೆ. ಇತ್ತೀಚಿಗಷ್ಟೇ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪಂದ್ಯದಲ್ಲಿ ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ನೀರಜ್ ಚೋಪ್ರಾ ಗಾಯದಿಂದ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿಯುವ ಸುದ್ದಿ ಹೊರಬಿದ್ದಿದೆ.
PublicNext
26/07/2022 03:39 pm