ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳಲ್ಲಿ ಗೆದ್ದು, ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ನಾಳೆ ಕೊನೆಯ ಪಂದ್ಯ ನಡೆಯಲಿದ್ದು, ಕ್ಲೀನ್ ಸ್ವೀಪ್ ಮೇಲೆ ಭಾರತ ಕಣ್ಣಿಟ್ಟಿದೆ. ಈ ಮೂಲಕ ಟೀಂ ಇಂಡಿಯಾ ಮೊದಲ ಬಾರಿಗೆ ವಿಂಡೀಸ್ ತಂಡವನ್ನು ಅವರ ನೆಲದಲ್ಲೇ ಕ್ಲೀನ್ ಸ್ವೀಪ್ ಮಾಡಿದ ದಾಖಲೆ ಮಾಡಲಿದೆ. ಆದರೆ ಭಾರತಕ್ಕೆ ಇದುವರೆಗೂ ಒಮ್ಮೆಯೂ ಕೆರಿಬಿಯನ್ ದೈತ್ಯರನ್ನು ಕ್ಲೀನ್ಸ್ವೀಪ್ ಮಾಡಲು ಸಾಧ್ಯವಾಗಿಲ್ಲ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಜುಲೈ 29ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಾಯಕ ರೋಹಿತ್ ಶರ್ಮಾ, ರಿಷಭ್ ಪಂತ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್ ಸೇರಿದಂತೆ ಅನೇಕ ಆಟಗಾರರು ಟ್ರಿನಿಡಾಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಕೆ.ಎಲ್. ರಾಹುಲ್ ತಂಡದಲ್ಲಿ ಕಾಣಿಸಿಕೊಳ್ಳದೆ ಇರುವುದು ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.
5 ಟಿ20 ಪಂದ್ಯಗಳಿಗೆ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆ.ಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್*, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
PublicNext
26/07/2022 06:32 pm