ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿರುವ ಇಂದಿನ ಪಂದ್ಯವು ಭಾರತಕ್ಕೆ ಮಹತ್ವದ್ದಾಗಿದೆ. ಟೀಂ ಇಂಡಿಯಾ ಈಗಾಗಲೇ ಮೊದಲ 2 ಪಂದ್ಯಗಳನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಂಡಿದ್ದು, ಈಗ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದೆ. ಈ ಮೂಲಕ ಟೀಂ ಇಂಡಿಯಾ ಮೊದಲ ಬಾರಿಗೆ ವಿಂಡೀಸ್ ತಂಡವನ್ನು ಅವರ ನೆಲದಲ್ಲೇ ಕ್ಲೀನ್ ಸ್ವೀಪ್ ಮಾಡಿದ ದಾಖಲೆ ಮಾಡಲಿದೆ. ಆದರೆ ಭಾರತಕ್ಕೆ ಇದುವರೆಗೂ ಒಮ್ಮೆಯೂ ಕೆರಿಬಿಯನ್ ದೈತ್ಯರನ್ನು ಕ್ಲೀನ್ಸ್ವೀಪ್ ಮಾಡಲು ಸಾಧ್ಯವಾಗಿಲ್ಲ.
PublicNext
27/07/2022 06:41 pm