ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ಹಾಗೂ ಭಾರತದ ನಡುವೆ ನಡೆಯುತ್ತಿರುವ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯಕ್ಕೆ ಮಳೆಯ ಅಡ್ಡಿಪಡಿಸಿದೆ.
ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತದ ಇನ್ನಿಂಗ್ಸ್‌ನ 24ನೇ ಓವರ್ ಮುಕ್ತಾಯದ ವೇಳೆಗೆ ವರುಣ ಆರ್ಭಟ ಜೋರಾಯಿತು. ಸದ್ಯ ಭಾರತವು 1 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದೆ. ಇನ್ನು ನಾಯಕ ಶಿಖರ್ ಧವನ್ 58 ರನ್ ಗಳಿಸಿ ವಿಕೆಟ್ ಕಳೆದುಕೊಂಡರು. ಉಳಿದಂತೆ ಶುಭ್ಮನ್ ಗಿಲ್ 51 ರನ್ ಹಾಗೂ ಶ್ರೇಯಸ್ ಅಯ್ಯರ್ 2 ರನ್ ಗಳಿಸಿ ವಿಕೆಟ್ ಕಾಯ್ದುಕೊಂಡಿದ್ದಾರೆ.
PublicNext
27/07/2022 10:37 pm