ಟ್ರಿನಿಡಾಡ್: ವೆಸ್ಟ್ ಇಂಡೀಸ್ ಹಾಗೂ ಭಾರತ ನಡುವಿನ ಟಿ20 ಸರಣಿಯ ಮೊದಲ ಪಂದ್ಯವು ಇಂದು ನಡೆಯಲಿದೆ. ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಸಾಧನೆ ಗೈದಿದ್ದ ಭಾರತ ತಂಡ ಇದೀಗ ಚುಟುಕು ಸಮರಕ್ಕೆ ಸಜ್ಜಾಗಿದೆ.
ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಇಂದು ಪಂದ್ಯ ನಡೆಯಲಿದೆ. ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ ಕೆ.ಎಲ್. ರಾಹುಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ.
ಪಂದ್ಯದ ಸಿದ್ಧತೆ ಬಗ್ಗೆ ನಾಯಕ ರೋಹಿತ್ ಶರ್ಮಾ ಮಾತನಾಡಿರುವ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.
PublicNext
29/07/2022 02:57 pm