ಟ್ರಿನಿಡಾಡ್: ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.
ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಭಾರತವು ಮೊದಲು ಬ್ಯಾಟಿಂಗ್ ಮಾಡಲಿದೆ. ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಸಾಧನೆ ಗೈದಿದ್ದ ಭಾರತ ತಂಡ ಇದೀಗ ಚುಟುಕು ಸಮರಕ್ಕೆ ಸಜ್ಜಾಗಿದೆ.
ಮುಂಬರುವ ಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಈ ಸರಣಿ ಉಭಯ ತಂಡಗಳಿಗೆ ಮಹತ್ವದಾಗಿದೆ. ಹೀಗಾಗಿ, ಮೊದಲ ಪಂದ್ಯದಲ್ಲಿ ಗೆಲುವು ದಾಖಲು ಮಾಡುವ ಇರಾದೆಯೊಂದಿಗೆ ಕಣಕ್ಕಿಳಿದಿವೆ. ಟಿ - 20 ಕ್ರಿಕೆಟ್ನಿಂದ ಹೊರಗುಳಿದಿದ್ದ ಆರ್.ಅಶ್ವಿನ್ ಇಂದಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
PublicNext
29/07/2022 08:03 pm