ಟ್ರಿನಿಡಾಡ್: ಉತ್ತಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ 68 ರನ್‌ಗಳಿಂದ ಗೆದ್ದು ಬೀಗಿದೆ.
ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಇಂದು ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು 6 ವಿಕೆಟ್ ನಷ್ಟಕ್ಕೆ 190 ರನ್ ದಾಖಲಿಸಿತ್ತು. ಭಾರತದ ಪರ ನಾಯಕ ರೋಹಿತ್ ಶರ್ಮಾ 64 ರನ್ (44 ಎಸೆತ), ದಿನೇಶ್ ಕಾರ್ತಿಕ್ 41 ರನ್ (19 ಎಸೆತ, 4 ಬೌಂಡರಿ, 2 ಸಿಕ್ಸ್) ಹಾಗೂ ಸೂರ್ಯಕುಮಾರ್ ಯಾದವ್ 24 ರನ್ ಗಳಿಸಿದ್ದರು.
ಬಳಿಕ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 8 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ವೆಸ್ಟ್ ಇಂಡೀಸ್‌ನ ಯಾವುದೇ ಆಟಗಾರರು 20ಕ್ಕಿಂತ ಅಧಿಕ ರನ್ ಗಳಿಸಲಿಲ್ಲ. ಇನ್ನು ಭಾರತದ ಪರ ಅರ್ಶ್‌ದೀಪ್ ಸಿಂಗ್, ಆರ್ ಅಶ್ವಿನ್ ಹಾಗೂ ರವಿ ಬಿಷ್ಣೋಯ್ ತಲಾ 2 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದುಕೊಂಡು ತಂಡಕ್ಕೆ ಗೆಲುವು ತಂದುಕೊಟ್ಟರು.
PublicNext
29/07/2022 11:45 pm