ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ- ಧವನ್‌ಗೆ ಮತ್ತೆ ನಾಯಕತ್ವ ಜವಾಬ್ದಾರಿ

ನವದೆಹಲಿ: ಜಿಂಬಾಬ್ವೆ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.

ಜಿಂಬಾಬ್ವೆ ವಿರುದ್ದ ಭಾರತ ಸರಣಿ ಆಡಿ 6 ವರ್ಷಗಳೇ ಕಳೆದಿವೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 6 ವರ್ಷಗಳ ಬಳಿಕ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿರುವುದು ವಿಶೇಷ.

ಭಾರತ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ ಹೀಗಿದೆ:

ಆಗಸ್ಟ್​ 18- ಮೊದಲ ಏಕದಿನ ಪಂದ್ಯ

ಆಗಸ್ಟ್ 20- ಎರಡನೇ ಏಕದಿನ ಪಂದ್ಯ

ಆಗಸ್ಟ್ 22- ಮೂರನೇ ಏಕದಿನ ಪಂದ್ಯ

Edited By : Vijay Kumar
PublicNext

PublicNext

30/07/2022 08:34 pm

Cinque Terre

57.7 K

Cinque Terre

0