ಬರ್ಮಿಂಗಂ: ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಕಾಮನ್ ವೆಲ್ತ್ ಗೇಮ್ಸ್ ಆರಂಭವಾಗಿದೆ. ಆಗಸ್ಟ್ 8ರ ವರೆಗೆ ನಡೆಯಲಿರುವ ಈ ಕ್ರೀಡಾಕೂಟದಲ್ಲಿ ಮೊದಲ ದಿನವೇ ಭಾರತದ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದಾರೆ.
ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ಕಾಮನ್ ವೆಲ್ತ್ ಕ್ರೀಡಾಕೂಟ ರಣರೋಚವಾಗಿ ಸಾಗಿದೆ. ಮಹಿಳೆಯರ 55 ಕೆಜಿ ವಿಭಾಗದಲ್ಲಿ ಭಾರತದ ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದರು. ಇದು ಈ ಬಾರಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ನಾಲ್ಕನೇ ಪದಕ.
ಇದೇ ವಿಭಾದಲ್ಲಿ ಒಟ್ಟು 203 ಕೆ.ಜಿ ಭಾರ ಎತ್ತಿದ ನೈಜೀರಿಯಾದ ಒಲರಿನೊಯ್ ಚಿನ್ನದ ಪದಕ ಗೆದ್ದರು.
PublicNext
31/07/2022 03:30 pm