ಬಾಸೆಟೆರೆ: ಟೀಂ ಇಂಡಿಯಾ ವಿರುದ್ಧ ಬೌಲಿಂಗ್-ಬ್ಯಾಟಿಂಗ್ನಲ್ಲಿ ಅಮೋಘ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್ ತಂಡವು 5 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಪ್ರವಾಸಿ ಭಾರತದ ವಿರುದ್ಧ ಮೊದಲ ಗೆಲುವು ಸಾಧಿಸಿದೆ. ಇದರೊಂದಿಗೆ ವಿಂಡೀಸ್ ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸಿದೆ.
ಆಟಗಾರರ ಕಿಟ್ಸ್ ತರುವಲ್ಲಿ ವಿಳಂಬವಾದ ಕಾರಣ 2ನೇ ಟಿ20 ಪಂದ್ಯವು ಮೂರು ಗಂಟೆಗಳ ಕಾಲ ತಡವಾಗಿ ಆರಂಭವಾಯಿತು. ಬಳಿಕ ಟಾಸ್ ಗೆದ್ದ ವೆಸ್ಟ್ ಇಂಡೀಸ್, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ, ಕೆಟ್ಟ ಆರಂಭ ಪಡೆಯಿತು. ಟೀಂ ಇಂಡಿಯಾ 19.4 ಓವರ್‌ಗಳಲ್ಲಿ ಎಲ್ಲಾ ಹತ್ತು ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿತು. ಬಳಿಕ ಭಾರತ ನೀಡಿದ ಸಾಧಾರಣ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡವು 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿ ಗೆಲುವು ಸಾಧಿಸಿತು.
PublicNext
02/08/2022 10:13 am