ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

CWG 2022: ಭಾರತಕ್ಕೆ 6ನೇ ಚಿನ್ನದ ಪದಕ; ಚರಿತ್ರೆ ಸೃಷ್ಟಿಸಿದ ಸುಧೀರ್

ಬರ್ಮಿಂಗ್​ಹ್ಯಾಮ್​: 2022ರ ಕಾಮನ್​ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತ ಚಿನ್ನ ಗಳಿಸಿದೆ. ಈ ಮೂಲಕ ಸುಧೀರ್ ಇತಿಹಾಸ ಸೃಷ್ಟಿಸಿದ್ದಾರೆ.

ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5  ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. 87 ಕೆ.ಜಿ. ಇರುವ ಸುಧೀರ್ ತಮ್ಮ ಮೊದಲ ಪ್ರಯತ್ನದಲ್ಲಿ 208 ಕೆ.ಜಿ ಭಾರ ಎತ್ತಿದರು. ಹೀಗೆ 132 ಕ್ಕೂ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದರು.

ಈ ಮೂಲಕ ಭಾರತದ ಪದಕಗಳ ಸಂಖ್ಯೆ 20 ಕ್ಕೇರಿದೆ. ಸದ್ಯ ಭಾರತದ ಬಳಿ ಆರು ಚಿನ್ನ, ಏಳು ಬೆಳ್ಳಿ ಮತ್ತು 7 ಕಂಚಿನ ಪದಕವಿದೆ.

Edited By : Vijay Kumar
PublicNext

PublicNext

05/08/2022 07:54 am

Cinque Terre

38.73 K

Cinque Terre

2