ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಪುರುಷರ ಲಾಂಗ್ ಜಂಪ್‌ನಲ್ಲಿ ಭಾರತದ ಮುರಳಿ ಶ್ರೀಶಂಕರ್ ಅವರು ರಜತ ಪದಕ ಗೆದ್ದುಕೊಂಡಿದ್ದಾರೆ.
2022ರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ 20ಕ್ಕೇರಿದೆ. ಭಾರತೀಯ ಕಾಲಮಾನದ ಪ್ರಕಾರ ಗುರುವಾರ ರಾತ್ರಿ ಕೂಡ ಭಾರತ ಎರಡು ಪದಕಗಳನ್ನು ಬಾಜಿಕೊಂಡಿತು. ಕಾಮನ್ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ ಲಾಂಗ್ಜಂಪ್ನಲ್ಲಿ ಮುರಳಿ ಶ್ರೀಶಂಕರ್ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ.
ವಿಶೇಷವೆಂದರೆ ಕಾಮನ್ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಭಾರತದ ಪರ ಬೆಳ್ಳಿ ಗೆದ್ದ ಮೊದಲ ಪುರುಷ ಲಾಂಗ್ಜಂಪರ್ ಶ್ರೀಶಂಕರ್ ಆಗಿದ್ದಾರೆ. 8.08 ಮೀ ಜಿಗಿತದ ಮೂಲಕ ಭಾರತಕ್ಕೆ ಐತಿಹಾಸಿಕ ಬೆಳ್ಳಿ ಪದಕ ಗೆದ್ದುಕೊಟ್ಟರು. ಈ ಮೂಲಕ ಸುರೇಶ್ ಬಾಬು ಬಳಿಕ ಪದಕ ಗೆದ್ದ ಭಾರತದ ಎರಡನೇ ಪುರುಷ ಲಾಂಗ್ಜಂಪರ್ ಎನಿಸಿಕೊಂಡಿದ್ದಾರೆ. ಸುರೇಶ್ ಅವರು 1978ರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕಂಚು ಗೆದ್ದಿದ್ದರು.
PublicNext
05/08/2022 10:29 am