ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಸದೃಢ ಭಾರತ ನಿರ್ಮಾಣಕ್ಕೆ ಗದಗ ಹಬ್ಬ ಸಹಕಾರಿ; ಎಸ್.ವ್ಹಿ. ಸಂಕನೂರ

ಗದಗ: ನಶಿಸುತ್ತಿರುವ ಕ್ರೀಡೆಗಳ ಪ್ರೋತ್ಸಾಹಿಸಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಗದಗ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಕಾಡೆಮಿ ಹಮ್ಮಿಕೊಂಡಿರುವ ಗದಗ ಹಬ್ಬ ಸದೃಢ ಭಾರತ ನಿರ್ಮಾಣದ ಕಾರ್ಯಕ್ಕೆ ಕೈಜೋಡಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ಹೇಳಿದರು.

ಶನಿವಾರ ಸಂಜೆ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಗದಗ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಕಾಡೆಮಿ ವತಿಯಿಂದ ಗದಗ ಹಬ್ಬ ನಿಮಿತ್ಯ ಕರಾಟೆ, ಪಗಡೆ, ಕೇರಂ, ಚೇಸ, ಸ್ಕೇಟಿಂಗ್, ಟೆನ್ನಿಸ್, ಸೆಟಲ್ ಮುಂತಾದ ಕ್ರೀಡೆಗಳ ಲೋಗೋ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸುಮಾರು ಮುಂದಿನ ೫ ತಿಂಗಳುಗಳ ಕಾಲ ಗದಗ ಜಿಲ್ಲೆಯಾದ್ಯಂತ ಸಾಹಿತ್ಯ, ಕ್ರೀಡೆ, ಸಂಸ್ಕೃತಿ, ಮುಂತಾದ ಕಾರ್ಯಕ್ರಮಗಳ ಮೂಲಕ ಈ ಭಾಗದ ಸೂಕ್ತ ಪ್ರತಿಭೆಗಳಿಗೆ ಉತ್ತೇಜನ ನೀಡಲು ಯುವನಾಯಕ ಅನಿಲ ಮೆಣಸಿನಕಾಯಿ ಹಾಗೂ ಅವರ ತಂಡ ಕೈಗೊಂಡ ಕಾರ್ಯ ಪ್ರಶಂಸನೀಯವಾಗಿದೆ. ಸರ್ಕಾರದಿಂದ ಯಾವುದೇ ಅನುದಾನ ಪಡೆಯದೇ ಕೇವಲ ಕ್ರೀಡಾ ಮನೋಭಾವನೆಯೊಂದಿಗೆ ಆಯೋಜನೆಗೊಳ್ಳುತ್ತಿರುವ ಈ ಗದಗ ಹಬ್ಬ ಆರೋಗ್ಯವಂತ ಸಮಾಜ ನಿರ್ಮಾಣ ಹಾಗೂ ದೈಹಿಕ ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಲಿ ಎಂದರು.

Edited By : Manjunath H D
PublicNext

PublicNext

07/08/2022 02:15 pm

Cinque Terre

34.91 K

Cinque Terre

0

ಸಂಬಂಧಿತ ಸುದ್ದಿ