ಬರ್ಮಿಂಗ್ ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳಾ ಟಿ20 ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ತಂಡವು 9 ರನ್‌ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದು, ಭಾರತ ತಂಡವು ಬೆಳ್ಳಿಗೆ ತೃಪ್ತಿಪಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತವು 19.3 ಓವರ್‌ಗಳಲ್ಲಿ 152 ರನ್ ಗಳಿಸಿ ಆಲೌಟ್ ಗೆ ತುತ್ತಾಗಿ ಸೋಲು ಒಪ್ಪಿಕೊಂಡಿತು. ಭಾರತದ ಪರ ನಾಯಕಿ ಹರ್ಮನ್ ಪ್ರೀತ್ ಕೌರ್ ಏಕಾಂಗಿ (65 ರನ್) ಹೋರಾಟ ನಡೆಸಿದರು.
PublicNext
08/08/2022 06:47 am