ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ 20 ವರ್ಷ ವಯಸ್ಸಿನ ಷಟ್ಲರ್ ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು ಸೋಲಿಸಿ ಭಾರತಕ್ಕೆ 20ನೇ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಭಾರತವು ಬ್ಯಾಡ್ಮಿಂಟನ್‌ನಲ್ಲಿ ಪುರುಷರ ಸಿಂಗಲ್ಸ್ ಮತ್ತು ಮಹಿಳೆಯರ ಸಿಂಗಲ್ಸ್ ಚಿನ್ನವನ್ನು ಗೆದ್ದುಕೊಂಡಿರುವುದು ಇದೇ ಮೊದಲು. ಲಕ್ಷ್ಯ ಸೇನ್ ಅವರಿಗೂ ಮುನ್ನ ಪಿವಿ ಸಿಂಧು ಅವರು ಕೆನಡಾದ ಮಿಚೆಲ್ ಲಿ ಅವರನ್ನು ಸೋಲಿಸಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದಿದ್ದರು.
PublicNext
08/08/2022 05:00 pm