ಮುಂಬೈ: 2022ರ ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದಿಂದಾಗಿ ಹಿರಿಯ ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಯ್ಕೆಗೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಕನ್ನಡಿಗರಿಗೆ ಖುಷಿ ವಿಚಾರವೆಂದರೆ ಕೆ.ಎಲ್.ರಾಹುಲ್ ಟೀಂ ಏಷ್ಯಾ ಕಪ್‌ಗೆ ಟೂರ್ನಿಗೆ ಲಭ್ಯವಾಗಿದ್ದಾರೆ. ಗಾಯದಿಂದಾಗಿ ಹಲವು ತಿಂಗಳುಗಳ ಕಾಲ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಆರಂಭಿಕ ಬ್ಯಾಟರ್ ಕೆ.ಎಲ್ ರಾಹುಲ್ ಅವರು ತಂಡಕ್ಕೆ ಮರಳಿದ್ದಾರೆ. ಈ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಕನ್ನಡಿಗನಿಗೆ ಉಪ ನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಅವರನ್ನು ನಿರೀಕ್ಷೆಯಂತೆ ವಿಕೆಟ್ ಕೀಪರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಇನ್ನು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.
ಆಗಸ್ಟ್ 27ರಂದು ಟೂರ್ನಿ ಆರಂಭವಾಗಲಿದ್ದು, ಸೆಪ್ಟಂಬರ್ 11ರಂದು ಫೈನಲ್ ಹಣಾಹಣಿಯ ಮೂಲಕ ಟೂರ್ನಿ ಅಂತ್ಯವಾಗಲಿದೆ. ಆಗಸ್ಟ್ 28ರಂದು ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ಟೀಂ ಇಂಡಿಯಾದ ಟೂರ್ನಿಯ ಅಭಿಯಾನ ಆರಂಭವಾಗಿದೆ.
ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ , ಅರ್ಷದೀಪ್ ಸಿಂಗ್, ಅವೇಶ್ ಖಾನ್.
PublicNext
08/08/2022 10:45 pm