ಇಂಗ್ಲೆಂಡ್‌ನಲ್ಲಿ ನಡೆದ ಕೌಂಟಿ ಪಂದ್ಯದಲ್ಲಿ ಆಡುವ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟೀಂ ಇಂಡಿಯಾದ ಜಿಂಬಾಬ್ವೆ ಪ್ರವಾಸದಿಂದ ಹೊರಗುಳಿದಿದ್ದಾರೆ.
ವಾಷಿಂಗ್ಟನ್ ಸುಂದರ್ ಬದಲಿಗೆ 27 ವರ್ಷದ ಆಲ್ ರೌಂಡರ್ ಶಹಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಶಹಬಾಜ್ ಅಹ್ಮದ್ ಅವರು ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ಮತ್ತು ಐಪಿಎಲ್‌ನಲ್ಲಿ ಆರ್‌ಸಿಬಿಯನ್ನು ಪ್ರತಿನಿಧಿಸುತ್ತಿದ್ದಾರೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡವು ಆಗಸ್ಟ್ 18ರಿಂದ ಜಿಂಬಾಬ್ವೆಯಲ್ಲಿ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.
PublicNext
16/08/2022 02:13 pm