ಭಾರತ ಮತ್ತು ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದು (ಗುರುವಾರ) ಆರಂಭವಾಗಲಿದೆ. ಗಾಯ ಹಾಗೂ ಕೊರೊನಾ ಕಾರಣದಿಂದ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಜವಾಬ್ದಾರಿಯೊಂದಿಗೆ ತಂಡಕ್ಕೆ ಮರಳಿದ್ದಾರೆ.
ಇನ್ನು ಟೀಂ ಇಂಡಿಯಾ ವಿರುದ್ಧ ಸರಣಿ ಗೆಲ್ಲುವ ವಿಶ್ವಾಸದಲ್ಲಿ ಜಿಂಬಾಬ್ವೆ ತಂಡ ಇದೆ. ಹೀಗಾಗಿ ಬಲಿಷ್ಠ ತಂಡ ಕಟ್ಟಲು ನಾಯಕ ಕೆ.ಎಲ್.ರಾಹುಲ್ ಹಾಗೂ ಕೋಚ್ ವಿ.ವಿ. ಲಕ್ಷ್ಮಣ್ ಯೋಚಿಸಿದ್ದಾರೆ.
ಭಾರತದ ಸಂಭಾವ್ಯ XI- ಕೆಎಲ್ ರಾಹುಲ್, ಶಿಖರ್ ಧವನ್, ರಾಹುಲ್ ತ್ರಿಪಾಠಿ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
PublicNext
18/08/2022 07:29 am