ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದ ಕನ್ನಡಿಗ ಕೆ.ಎಲ್​ ರಾಹುಲ್; ಹರಿದು ಬಂದ ಮೆಚ್ಚುಗೆಯ ಮಹಾಪುರ

ಹರಾರೆ: ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕೆ.ಎಲ್.ರಾಹುಲ್ ನೇತೃತ್ವದ ಟೀಂ ಇಂಡಿಯಾ 10 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಈ ಪಂದ್ಯದ ಆರಂಭಕ್ಕೂ ಮುನ್ನ ನಾಯಕ ಕೆ.ಎಲ್. ರಾಹುಲ್ ಭಾರತೀಯರ ಮನ ಗೆದ್ದಿದ್ದಾರೆ.

ಕ್ರಿಕೆಟ್​ ಪಂದ್ಯ ಆರಂಭವಾಗುವ ಮುನ್ನ 2 ದೇಶಗಳ ರಾಷ್ಟ್ರಗೀತೆ ಹಾಡುವುದು ಮೊದಲಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ. ಅದೇ ರೀತಿ ನಿನ್ನೆ (ಗುರುವಾರ) ನಡೆದ ಭಾರತ ಮತ್ತು ಜಿಂಬಾಬ್ವೆ ತಂಡಗಳ ನಡುವಿನ ಪಂದ್ಯದ ಮೊದಲು ರಾಷ್ಟ್ರಗೀತೆಯನ್ನು ಹಾಡಲಾಯಿತು. ಮೊದಲು ಚ್ಯೂಯಿಂಗ್ ಗಮ್ ಜಗಿಯುತ್ತಿದ್ದ ರಾಹುಲ್​, ಇನ್ನೇನು ರಾಷ್ಟ್ರಗೀತೆ ಆರಂಭವಾಗಲಿದೆ ಎಂಬುದನ್ನು ತಿಳಿದು ಚೂಯಿಂಗ್ ಗಮ್ ಅನ್ನು ತೆಗೆದು ಹಾಕುವ ಮೂಲಕ ರಾಷ್ಟ್ರಗೀತೆಗೆ ಗೌರವವನ್ನು ನೀಡಿದರು. ಈ ವೇಳೆ ಅವರ ನಡೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಕನ್ನಡಿಗನ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Edited By : Vijay Kumar
PublicNext

PublicNext

19/08/2022 03:03 pm

Cinque Terre

55.71 K

Cinque Terre

1

ಸಂಬಂಧಿತ ಸುದ್ದಿ