ಹರಾರೆ: ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯನ್ನು ಈಗಾಗಲೇ ಭಾರತ ಗೆದ್ದುಕೊಂಡಿದ್ದು, ಇದೀಗ ಕ್ಲೀನ್ ಸ್ವೀಪ್ ಮೇಲೆ ಕಣ್ಣಿಟ್ಟಿದೆ.
ಭಾರತ ಮೊದಲ ಪಂದ್ಯವನ್ನು 10 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಕನ್ನಡಿಗ ಕೆ.ಎಲ್. ರಾಹುಲ್ ನಾಯಕತ್ವದಲ್ಲಿ ಭಾರತ ಮೊದಲ ಬಾರಿಗೆ ಸರಣಿ ಗೆದ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಮೂಲಕ ಮೊದಲ ಗೆಲುವನ್ನು ದಾಖಲೆ ಪುಟಗಳಿಗೆ ಸೇರಿಸಲು ಪ್ರಯತ್ನಿಸುತ್ತಿದೆ. ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವು ಇಂದು (ಆಗಸ್ಟ್ 22)ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ.
PublicNext
22/08/2022 07:11 am