ದುಬೈ: ಐಸಿಸಿ ಪುರುಷರ ಏಕದಿನ ಶ್ರೇಯಾಂಕ ಪ್ರಕಟಗೊಂಡಿದೆ. ಮತ್ತೆ ನ್ಯೂಜಿಲೆಂಡ್ ತಂಡವು ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಜಿಂಬಾಬ್ವೆ ತಂಡದ ಎದುರು ಭಾರತ ತಂಡ ಕ್ಲೀನ್ ಸ್ವೀಪ್ ಮಾಡುವ ಮೂಲಕ ಮಂಗಳವಾರ ಬಿಡುಗಡೆಯಾದ ಐಸಿಸಿ ಏಕದಿನದ ತಂಡದ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ.
ಭಾರತವು ಜಿಂಬಾಬ್ವೆ ವಿರುದ್ಧ ಸರಣಿ ವಶ ಮಾಡಿಕೊಳ್ಳುವುದರ ಮೂಲಕವಾಗಿ ಸದ್ಯ 111 ರೇಟೆಂಗ್ ನೊಂದಿಗೆ ಮೂರನೆ ಸ್ಥಾನದಲ್ಲಿದೆ. ಇನ್ನು ನ್ಯೂಜಿಲೆಂಡ್124 ರೇಟಿಂಗ್ ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 119 ಅಂಕಗಳೊಂದಿಗೆ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ. ಇನ್ನು ಕ್ರಮವಾಗಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಶ್ರೀಲಂಕಾ, ವೆಸ್ಟ್ ಇಂಡೀಸ್, ಮತ್ತು ಹತ್ತನೇ ಸ್ಥಾನದಲ್ಲಿ ಅಪಘಾನಿಸ್ಥಾನವಿದೆ.
PublicNext
23/08/2022 04:42 pm