ಐಸಿಸಿ ಇತ್ತೀಚಿನ ಏಕದಿನ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಮತ್ತೊಂದೆಡೆ ಭಾರತದ ಯುವ ಸ್ಟಾರ್ ಶುಭ್ಮನ್ ಗಿಲ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವನ್ನು ಸಾಧಿಸಿದ್ದಾರೆ.
ಹರಾರೆಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಶುಭ್ಮನ್ ಗಿಲ್ 93 ಸ್ಥಾನಗಳ ಏರಿಕೆ ಕಂಡು 38ನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಕಿವೀಸ್ ಬೌಲರ್ ಬೋಲ್ಟ್ ನಂ.1 ಸ್ಥಾನದಲ್ಲಿದ್ದರೆ, ಭಾರತದ ಸ್ಟಾರ್ ಬೌಲರ್ ಜಸ್‌ಪ್ರೀತ್ ಬುಮ್ರಾ ಎರಡು ಸ್ಥಾನ ಕುಸಿತ ಕಂಡಿದ್ದಾರೆ.
PublicNext
24/08/2022 07:50 pm