ದುಬೈ: ಏಷ್ಯಾ ಕಪ್ ಟೂರ್ನಿಯಲ್ಲಿ ಇಂದು ಪಾಕಿಸ್ತಾನ, ಭಾರತ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದೇ ವೇಳೆ ಟೀಂ ಇಂಡಿಯಾಗೆ ಗುಡ್ ನ್ಯೂಸ್ ಲಭ್ಯವಾಗಿದ್ದು, ಇಂದು ಪಾಕಿಸ್ತಾನ ವಿರುದ್ಧದ ಭಾರತದ ಆರಂಭಿಕ ಪಂದ್ಯದ ವೇಳೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತೀಯ ಡ್ರೆಸ್ಸಿಂಗ್ ರೂಮ್‌ನಲ್ಲಿ ಇರುತ್ತಾರೆ ಎನ್ನಲಾಗಿದೆ.
ಕೊರೊನಾ ನೆಗೆಟಿವ್ ವರದಿ ಬಂದ ಬಳಿಕ ನಿಯಮಗಳ ಅನ್ವಯ ರಾಹುಲ್ ಶನಿವಾರವೇ ಯುಎಇಗೆ ಪ್ರಯಾಣ ಬೆಳೆಸಿದ್ದಾರಂತೆ. ರಾಹುಲ್ ದ್ರಾವಿಡ್ ಗೈರು ಹಾಜರಿಯಲ್ಲಿ ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಸೇರಿದಂತೆ ಇತರೇ ಆಟಗಾರರೊಂದಿಗೆ ಲಕ್ಷ್ಮಣ್, ಜಿಂಬಾಬ್ವೆಯಿಂದ ನೇರ ಯುಎಇಗೆ ಪ್ರಯಾಣ ಬೆಳೆಸಿದ್ದರು.
ಟೀಂ ಇಂಡಿಯಾ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್/ಅವೇಶ್ ಖಾನ್, ಭುವನೇಶ್ವರ್ ಕುಮಾರ್, ಚಹಲ್, ಅರ್ಶ್ದೀಪ್ ಸಿಂಗ್.
PublicNext
28/08/2022 02:21 pm