ಶ್ರೀನಗರ: ಇಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಗುಂಪಿನಲ್ಲಿ ನೋಡದಂತೆ ಶ್ರೀನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಆಡಳಿತ ಮಂಡಳಿ ವಿವಾದಾತ್ಮಕ ಆದೇಶವೊಂದನ್ನು ಹೊರಡಿಸಿದೆ.
ಹಾಸ್ಟೆಲ್ ಕೊಠಡಿಗಳಲ್ಲಿ ಗುಂಪುಗಳಲ್ಲಿ ಪಂದ್ಯವನ್ನು ವೀಕ್ಷಿಸಿದ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪಂದ್ಯದ ಕುರಿತು ಪೋಸ್ಟ್ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ನಿಯಮಗಳನ್ನು ಉಲ್ಲಂಘಿಸಿದವರನ್ನು ಹಾಸ್ಟೆಲ್‌ನಿಂದ ಹೊರಹಾಕಲಾಗುವುದರ ಜೊತೆ 5 ಸಾವಿರ ರೂ. ದಂಡ ವಿಧಿಸುವುದಾಗಿ ಎನ್‌ಐಟಿ ಆಡಳಿತ ಮಂಡಳಿ ತಿಳಿಸಿದೆ ಎಂದು ವರದಿಯಾಗಿದೆ.
PublicNext
28/08/2022 07:02 pm