ದುಬೈ: ಏಷ್ಯಾ ಕಪ್ 2022ರ ಟೂರ್ನಿಯ ಭಾಗವಾಗಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಇಂದಿನ ಪಂದ್ಯದಲ್ಲಿ ರಿಷಭ್ ಪಂತ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಿಂದ ಕೈಬಿಡಲಾಗಿದೆ. ಬದಲಾಗಿ ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನೀಡಲಾಗಿದೆ.
ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ ಕುಮಾರ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಯಜುವೇಂದ್ರ ಚಾಹಲ್.
PublicNext
28/08/2022 07:06 pm