ದುಬೈ: ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ 2022 ಟೂರ್ನಿಯಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನದ ಆಟಗಾರರು ಕಪ್ಪು ಪಟ್ಟಿಯನ್ನು ಧರಿಸಿದ್ದಾರೆ. ಪಾಕಿಸ್ತಾನದಾದ್ಯಂತ ಪ್ರವಾಹ ಪೀಡಿತ ಜನರಿಗೆ ತಮ್ಮ ಒಗ್ಗಟ್ಟು ಮತ್ತು ಬೆಂಬಲವನ್ನು ವ್ಯಕ್ತಪಡಿಸಲು ಪಾಕ್ ಕ್ರಿಕೆಟ್ ಆಟಗಾರರು ಕಪ್ಪು ಪಟ್ಟಿ ಕಟ್ಟಿಕೊಂಡಿದ್ದಾರೆ. ದೇಶದಲ್ಲಿ ಪ್ರವಾಹದ ಮಧ್ಯೆ ಜೂನ್ 14ರಿಂದ ಕನಿಷ್ಠ 1,033 ಜನರು ಸಾವನ್ನಪ್ಪಿದ್ದಾರೆ ಮತ್ತು 1,527 ಜನರು ಗಾಯಗೊಂಡಿದ್ದಾರೆ. ಪಾಕಿಸ್ತಾನದ 110 ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿವೆ.
PublicNext
28/08/2022 08:40 pm