ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಯಲ್ಲಿ ಕನಿಷ್ಠ 100 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ವಿರಾಟ್ ಕೊಹ್ಲಿ ಅವರಿಗೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅಭಿನಂದನೆ ತಿಳಿಸಿದ್ದಾರೆ.
"ಎಂತಹ ಅದ್ಭುತ ಸಾಧನೆ. ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ. ನಿಮ್ಮ 100ನೇ ಟಿ20 ಅಂತರರಾಷ್ಟ್ರೀಯ ಪಂದ್ಯಕ್ಕೆ ಆಲ್ ದಿ ವೆರಿ ಬೆಸ್ಟ್" ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಭಾರತದ ಏಷ್ಯಾ ಕಪ್ 2022ರ ಪಾಕಿಸ್ತಾನ ವಿರುದ್ಧದ ಆರಂಭಿಕ ಪಂದ್ಯವು ಕೊಹ್ಲಿಯ 100ನೇ ಟಿ20 ಪಂದ್ಯವಾಗಿದೆ.
PublicNext
28/08/2022 08:53 pm