ದುಬೈ: ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ ಸಮಯೋಚಿತ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡವು ಪಾಕಿಸ್ತಾನದ ವಿರುದ್ಧ 5 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಏಷ್ಯಾ ಕಪ್ 2022ರ ಟೂರ್ನಿಯ ಭಾಗವಾಗಿ ದುಬೈನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನವು 19.5 ಓವರ್‌ಗಳಲ್ಲಿ 147 ರನ್ ಗಳಿಸಿ ಆಲೌಟ್‌ಗೆ ತುತ್ತಾಗಿತ್ತು. ಪಾಕಿಸ್ತಾನದ ಪರ ಮೊಹಮ್ಮದ್ ರಿಜ್ವಾನ್ 43 ರನ್ ಹಾಗೂ ಇಫ್ತಿಕಾರ್ ಅಹಮದ್ 28 ರನ್ ಗಳಿಸಿದ್ದರು.
ಬಳಿಕ 148 ರನ್‌ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡವು 19.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿ ಪಾಕಿಸ್ತಾನಕ್ಕೆ ಸೋಲುಣಿಸಿದೆ. ಭಾರತದ ಪರ ವಿರಾಟ್ ಕೊಹ್ಲಿ 35 ರನ್, ರವೀಂದ್ರ ಜಡೇಜಾ 35 ರನ್ ಹಾಗೂ ಹಾರ್ದಿಕ್ ಪಾಂಡ್ಯ 17 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿದರು.
ಇದಕ್ಕೂ ಮುನ್ನ ಟೀಂ ಇಂಡಿಯಾ ಪರ ಭುವನೇಶ್ವರ ಕುಮಾರ್ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ ಪ್ರಮುಖ 4 ವಿಕೆಟ್ ಉರುಳಿಸಿ ಮಿಂಚಿದ್ದರು. ಇನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ 3 ವಿಕೆಟ್ ಕಿತ್ತರೆ, ಅರ್ಶದೀಪ್ ಸಿಂಗ್ 2 ವಿಕೆಟ್ ಹಾಗೂ ಅವೇಶ್ ಖಾನ್ 1 ವಿಕೆಟ್ ಪಡೆದುಕೊಂಡಿದ್ದರು.
PublicNext
28/08/2022 11:45 pm