ದುಬೈ: ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಉತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡವು ಹಾಂಗ್ ಕಾಂಗ್ ವಿರುದ್ಧ 40 ರನ್ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಏಷ್ಯಾಕಪ್‍ನ ಸೂಪರ್ 4 ಹಂತಕ್ಕೆ ಲಗ್ಗೆ ಇಟ್ಟಿದೆ.
ದುಬೈನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತವು ಸೂರ್ಯಕುಮಾರ್ ಯಾದವ್ ಅಜೇಯ (68 ರನ್), ವಿರಾಟ್ ಕೊಹ್ಲಿ ಅಜೇಯ (59 ರನ್), ಕೆ.ಎಲ್.ರಾಹುಲ್ (36 ರನ್) ಸಹಾಯದಿಂದ 2 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ಹಾಂಗ್ ಕಾಂಗ್ ತಂಡವು 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
PublicNext
01/09/2022 06:50 am