ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: 6 ವರ್ಷದ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡಿದ ಕೊಹ್ಲಿ

ದುಬೈ: ಏಷ್ಯಾ ಕಪ್ 2022ರ ಭಾಗವಾಗಿ ಬುಧವಾರ ನಡೆದ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ಧ ಭಾರತ ತಂಡವು 40 ರನ್‌ಗಳಿಂದ ಗೆದ್ದು ಸೂಪರ್ 4 ಹಂತಕ್ಕೆ ಎಂಟ್ರಿ ಕೊಟ್ಟಿದೆ. ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಒಂದು ಓವರ್ ಬೌಲಿಂಗ್ ಮಾಡಿ ಸೈ ಎನಿಸಿಕೊಂಡಿದ್ದಾರೆ.

ವಿಶೇಷವೆಂದರೆ ವಿರಾಟ್ 6 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್ ‌ಮಾಡಿದ್ದಾರೆ. ಅವರು ಈ ಪಂದ್ಯದಲ್ಲಿ 6 ರನ್ ನೀಡಿದರು. ವಿರಾಟ್ ಕೊಹ್ಲಿ ಈವರೆಗೂ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 25.2 ಓವರ್ ಬೌಲಿಂಗ್ ಮಾಡಿ 4 ವಿಕೆಟ್ ಕಿತ್ತು 204 ರನ್ ನೀಡಿದ್ದಾರೆ.

Edited By : Vijay Kumar
PublicNext

PublicNext

01/09/2022 07:49 am

Cinque Terre

54.83 K

Cinque Terre

1