ದುಬೈ: ಏಷ್ಯಾ ಕಪ್ 2022ರ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನವು ಬೌಲಿಂಗ್ ಆಯ್ದುಕೊಂಡಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಮುಖ ಮೂರು ಬದಲಾವಣೆ ಮಾಡಿಕೊಂಡಿದೆ.
ಟೂರ್ನಿಯ ಮೊದಲಾರ್ಧದ ಬಳಿಕ ರವೀಂದ್ರ ಜಡೇಜಾ ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಹೊರ ನಡೆದಿರುವ ಹಿನ್ನೆಲೆಯಲ್ಲಿ ರಿಷಭ್ ಪಂತ್‌ಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ನೀಡಬೇಕು ಹಾಗೂ ಬ್ಯಾಟಿಂಗ್ ಅಗ್ರ ಆರು ಕ್ರಮಾಂಕಗಳ ಮೇಲೆ ಆಡಿಸಬೇಕೆಂದು ಎಂಬ ಸಲಹೆಗಳು ಬಂದಿದ್ದವು. ಅಷ್ಟೇ ಅಲ್ಲದೆ ತಂಡಕ್ಕೆ ಎಡಗೈ ಬ್ಯಾಟರ್ ಅಗತ್ಯ ಇರುವ ಹಿನ್ನಲೆಯಲ್ಲಿ ರಿಷಭ್ ಪಂತ್‌ಗೆ ಅವಕಾಶ ನೀಡಿ ದಿನೇಶ್ ಕಾರ್ತಿಕ್ ಅವರನ್ನು ಕೈಬಿಡಲಾಗಿದೆ.
ಇನ್ನು ರವೀಂದ್ರ ಜಡೇಜಾ ಸ್ಥಾನದಲ್ಲಿ ದೀಪಕ್ ಹೂಡಾ ಹಾಗೂ ಅವೇಶ್ ಖಾನ್ ಜಾಗದಲ್ಲಿ ರವಿ ಬಿಷ್ಣೋಯ್ ಅವರಿಗೆ ಅವಕಾಶ ನೀಡಲಾಗಿದೆ.
ಟೀಂ ಇಂಡಿಯಾ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯಜುವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.
ಪಾಕಿಸ್ತಾನ (ಪ್ಲೇಯಿಂಗ್ XI): ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ.
PublicNext
04/09/2022 07:26 pm