ನವದೆಹಲಿ: ಟೀಂ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮಂಗಳವಾರ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ ತಮ್ಮ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಪ್ರಯತ್ನಿಸುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಜಡೇಜಾ ತಮ್ಮ ಇನ್ಸ್ಟಾ ಗ್ರಾಮ್ನಲ್ಲಿ ಮಾಹಿತಿ ನೀಡಿದ್ದು, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಈ ಸಂದರ್ಭದಲ್ಲಿ ಅನೇಕರು ನನಗೆ ಸಹಾಯ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಬಿಸಿಸಿಐ, ವೈದ್ಯರು, ಸಪೋರ್ಟ್ ಸ್ಟಾಪ್ ಮತ್ತು ಫ್ಯಾನ್ಸ್ಗೆ ಧನ್ಯವಾದಗಳು. ಸದ್ಯದಲ್ಲೇ ನಾನು ರಿಹ್ಯಾಬ್ಗೆ ಒಳಗಾಗಿ ಮತ್ತೆ ಕಮ್ಬ್ಯಾಕ್ ಮಾಡ್ತೇನೆ ಎಂದು ತಿಳಿಸಿದ್ದಾರೆ.
ಜಡೇಜಾ ಏಷ್ಯಾ ಕಪ್ ಟೂರ್ನಿಯಲ್ಲಿ ಗಾಯಮಾಡಿಕೊಂಡಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 35 ರನ್ ಬಾರಿಸಿದ್ದರು. ಅಲ್ಲದೇ ಎರಡು ಓವರ್ ಬೌಲಿಂಗ್ ಮಾಡಿ ಕೇವಲ 11 ರನ್ ಮಾತ್ರ ನೀಡಿದ್ದರು. ಬೌಲಿಂಗ್ನಲ್ಲಿ 15 ರನ್ ನೀಡಿ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
PublicNext
07/09/2022 03:29 pm