ನವದೆಹಲಿ: ಬಿಸಿಸಿಐ ಇಂದು 2022ರ T20 ವಿಶ್ವಕಪ್‌ಗಾಗಿ 15 ಆಟಗಾರರ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ.
ರೋಹಿತ್ ಶರ್ಮಾ ಮೊದಲ ಬಾರಿಗೆ ಪ್ರಮುಖ ICC ಟೂರ್ನಮೆಂಟ್‌ನಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಹರ್ಷಲ್ ಪಟೇಲ್ ಅವರು ತಮ್ಮ ಚೊಚ್ಚಲ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲಿದ್ದಾರೆ. ಕಳೆದ ವರ್ಷದ ಟಿ20 ವಿಶ್ವಕಪ್‌ಗೆ ಆಯ್ಕೆಯಾಗದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಗಾಯದ ಸಮಸ್ಯೆಯಿಂದ ಏಷ್ಯಾ ಕಪ್ ಟೂರ್ನಿಯಿಂದ ಹೊರಗುಳಿದಿದ್ದ ಜಸ್‌ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಗೆ ಲಭ್ಯವಾಗಲಿದ್ದಾರೆ.
ಟೀಂ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜುವೇಂದ್ರ ಚಹಾಲ್, ಅಕ್ಸರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
PublicNext
12/09/2022 06:11 pm