ಮೊಹಾಲಿ: ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಇಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್‌ನ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಇಂದಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ರೋಚಕತೆಯನ್ನು ಕ್ರಿಕೆಟ್ ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ.
ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯಜುವೇಂದ್ರ ಚಾಹಲ್.
PublicNext
20/09/2022 06:44 pm