ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯಕ್ಕೆ ಟಿಕೆಟ್ ಪಡೆಯಲು ಹೈದರಾಬಾದ್‌ನ ಜಿಮ್ಖಾನಾ ಮೈದಾನದಲ್ಲಿ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಕನಿಷ್ಠ 4 ಜನರು ತೀವ್ರ ಗಾಯಗೊಂಡಿದ್ದಾರೆ.
ಹೈದರಾಬಾದ್‌ನ ಜಿಮ್ಖಾನಾ ಮೈದಾನದಲ್ಲಿ ಸೆಪ್ಟೆಂಬರ್ 25ರಂದು ಪಂದ್ಯ ನಡೆಯಲಿದೆ. ಹೀಗಾಗಿ ಅಭಿಮಾನಿಗಳು ಟಿಕೆಟ್‌ಗಾಗಿ ಬೆಳಿಗ್ಗೆ 5 ಗಂಟೆಯಿಂದಲೇ ಕ್ರೀಡಾಂಗಣದ ಎದುರು ನಿಂತಿದ್ದರು. ಟಿಕೆಟ್ ಕೌಂಟರ್ಗಳನ್ನು 10 ಗಂಟೆಗೆ ತೆರೆದ ಕ್ರೀಡಾಂಗಣದ ಸಿಬ್ಬಂದಿ ಏಕಕಾಲಕ್ಕೆ 20 ಮಂದಿಯನ್ನು ಮಾತ್ರ ಒಳಗೆ ಬಿಟ್ಟು, ಟಿಕೆಟ್ ಕೊಡುತ್ತಿದ್ದರು. ಟಿಕೆಟ್ ವಿತರಣೆ ತಡವಾಗುತ್ತಿದೆ ಎಂದು ಆರೋಪಿಸಿದ ಅಭಿಮಾನಿಗಳು ಏಕಾಏಕಿ ಒಳನುಗ್ಗಲು ಯತ್ನಿಸಿದರು. ಈ ವೇಳೆ ಕೆಲವರು ಕ್ರೀಡಾಂಗಣದ ಒಳಗೆ ಪ್ರವೇಶಿಸಲೆಂದು ಗೇಟ್ ಒಡೆದರು. ಇದರಿಂದಾಗಿ ನೂಕಾಟ-ತಳ್ಳಾಟ ನಡೆವಾಯಿತು. ಆದರೆ ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿ ಸ್ಥಳದಲ್ಲಿ ಇರಲಿಲ್ಲ. ತಕ್ಷಣವೇ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಯಿತು. ನೂಕಾಟ- ತಳ್ಳಾಟ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ್ದಾರೆ.
ಘಟನೆಯಲ್ಲಿಕಾಲ್ತುಳಿತದಿಂದ ಕೆಲ ಪೊಲೀಸ್ ಸಿಬ್ಬಂದಿ, ಮಹಿಳೆಯರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಇನ್ನು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು.
PublicNext
22/09/2022 05:50 pm