ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsAUS: ಇಂದು ಭಾರತಕ್ಕೆ ಮಾಡು ಇಲ್ಲ ಮಡಿ ಪಂದ್ಯ

ಮುಂಬೈ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯವು ಇಂದು ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ.

ಈಗಾಗಲೇ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಭಾರತಕ್ಕೆ ಇಂದಿನ ಪಂದ್ಯವು ಭಾರಿ ಮಹತ್ವದ್ದಾಗಿದೆ. ಸರಣಿಯಲ್ಲಿ ಜೀವಂತವಾಗುಳಿಯಬೇಕಾದರೆ ರೋಹಿತ್ ಶರ್ಮಾ ನೇತೃತ್ವ ಬಳಗಕ್ಕೆ ಗೆಲುವು ಅಗತ್ಯವಾಗಿದೆ. ಇನ್ನು ಮೊಹಲಿಯಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಆದರೆ ಬೌಲಿಂಗ್ ನಲ್ಲಿ ವೈಫಲ್ಯ ಎದುರಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಬೌಲರ್‌ಗಳ ಆಯ್ಕೆಯಲ್ಲಿ ಮಹತ್ವದ ಬದಲಾವಣೆ ಆಗಬಹುದು.

Edited By : Vijay Kumar
PublicNext

PublicNext

23/09/2022 07:55 am

Cinque Terre

91.22 K

Cinque Terre

1

ಸಂಬಂಧಿತ ಸುದ್ದಿ