ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಸರಣಿಯ ಅಂತಿಮ ಮತ್ತು 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಪಂದ್ಯವು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಈಗಾಗಲೇ ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿದ್ದು, ಇಂದಿನ ಪಂದ್ಯದ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ. ಇಂದಿನ ಪಂದ್ಯವನ್ನು ಗೆಲ್ಲುವ ತಂಡ ಟಿ20 ಸರಣಿಯನ್ನು ಗೆದ್ದು ಬೀಗಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಯಜುವೇಂದ್ರ ಚಹಾಲ್, ಹರ್ಷಲ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ ಕುಮಾರ್.
ಆಸ್ಟ್ರೇಲಿಯಾ ಸಂಭಾವ್ಯ ತಂಡ: ಆರೋನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
PublicNext
25/09/2022 06:42 pm