ಹೈದರಾಬಾದ್: ಕ್ಯಾಮೆರಾನ್ ಗ್ರೀನ್ ಹಾಗೂ ಟಿಮ್ ಡೇವಿಡ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 187 ರನ್‌ಗಳ ಗುರಿ ನೀಡಿದೆ.
ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಸರಣಿಯ ಅಂತಿಮ ಮತ್ತು 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಪಡೆ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿದೆ. ತಂಡದ ಪರ ಕ್ಯಾಮೆರಾನ್ ಗ್ರೀನ್ 52 ರನ್ (21 ಎಸೆತ) ಹಾಗೂ ಟಿಮ್ ಡೇವಿಡ್ 54 ರನ್ (27 ಎಸೆತ) ಗಳಿಸಿದರು.
PublicNext
25/09/2022 09:02 pm