ಹೈದರಾಬಾದ್: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ.
28ರ ಹರೆಯದ ಬುಮ್ರಾ ತಮ್ಮ ನಾಲ್ಕು ಓವರ್‌ಗಳಲ್ಲಿ 50 ರನ್‌ಗಳನ್ನು ನೀಡಿದರು ಮತ್ತು ಯಾವುದೇ ವಿಕೆಟ್ ಪಡೆಯಲಿಲ್ಲ. ಆಗಸ್ಟ್ 27, 2016 ರಂದು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್ ಪಡೆದು 47 ರನ್ ನೀಡಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಯಾವುದೇ ವಿಕೆಟ್ ಪಡೆದುಕೊಳ್ಳದೆ 50 ರನ್ ನೀಡಿ ಕೆಟ್ಟ ಅಂಕಿ-ಅಂಶಕ್ಕೆ ಗುರಿಯಾಗಿದ್ದಾರೆ.
PublicNext
26/09/2022 07:36 am