ಗುವಾಹಟಿ: ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ನಡೆಯಲಿದೆ. ಈ ಪಂದ್ಯವು ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿದೆ. ಆದರೆ ಈ ನಡುವೆಯೇ ಹವಾಮಾನ ಇಲಾಖೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಪಂದ್ಯದ ವೇಳೆ ಗುವಾಹಟಿಯಲ್ಲಿ 28 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ. ಆದರೆ ಶೇ.99 ರಷ್ಟು ಮೋಡ ಕವಿಯುವ ಸಾಧ್ಯತೆಯಿದ್ದು, ಸಣ್ಣ ಪ್ರಮಾಣದ ಮಳೆಯಾಗುವ ಆತಂಕವೂ ಇದೆ. ಶೇ.6ರಷ್ಟು ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
PublicNext
01/10/2022 08:44 pm