ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsSA: ಟಾಸ್ ಗೆದ್ದ ದ.ಆಫ್ರಿಕಾ ಬೌಲಿಂಗ್ ಆಯ್ಕೆ

ಗುವಾಹಟಿ: ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯ ಇಂದಿನ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಸರಣಿ ವಶವಾಗಲಿದೆ.

ಜಸ್ಪ್ರೀತ್ ಬುಮ್ರಾ ಗಾಯದ ಕಾರಣ ತಂಡದಿಂದ ಹೊರಗುಳಿದ್ದಿದ್ದಾರೆ. ಅವರ ಜಾಗಕ್ಕೆ ಮೊಹಮ್ಮದ್ ಸಿರಾಜ್​ರನ್ನು ಆಯ್ಕೆ ಮಾಡಲಾಗಿದೆ. ಟಿ-20 ವಿಶ್ವಕಪ್​ಗೂ ಮುನ್ನ ಬಲಿಷ್ಠ ಬೌಲಿಂಗ್​ ಪಡೆಯನ್ನು ಕಟ್ಟಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಬುಮ್ರಾ ಅನುಪಸ್ಥಿತಿ ಕಾಡಲಿದೆ. ಏಷ್ಯಾ ಕಪ್​ನಲ್ಲಿ ಕಳಪೆ ಬೌಲಿಂಗ್​ನಿಂದ ತಂಡ ಟೀಕೆಗೆ ಗುರಿಯಾಗಿತ್ತು. ಆಸ್ಟ್ರೇಲಿಯಾದ ಎದುರು ಸಹ ಬೌಲಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿತ್ತು. ದಕ್ಷಿಣ ಆಫ್ರಿಕಾದ ಎದುರು ಕೇರಳದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬೌಲಿಂಗ್​ ಪ್ರದರ್ಶನ ಉತ್ತಮವಾಗಿತ್ತು.

Edited By : Vijay Kumar
PublicNext

PublicNext

02/10/2022 06:48 pm

Cinque Terre

46.57 K

Cinque Terre

0