ನವದೆಹಲಿ: ದಕ್ಷಿಣ ಆಫ್ರಿಕಾದ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ.
ಅಕ್ಟೋಬರ್ 6ರಿಂದ ಆರಂಭವಾಗಲಿರುವ ಸರಣಿಯ ನೇತೃತ್ವವನ್ನು ಶಿಖರ್ ಧವನ್ ವಹಿಸಿಕೊಳ್ಳಲಿದ್ದಾರೆ. ಧವನ್ ಸೇರಿದಂತೆ 15 ಸದಸ್ಯರನ್ನು ಒಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಅದರಲ್ಲೂ ಭಾರೀ ವಿರೋಧದ ಬಳಿಕ ಸಂಜು ಸ್ಯಾಮ್ಸನ್ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ರಜತ್ ಪಾಟೀದಾರ್ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಭಾರತ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟೀದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್ ಹಾಗೂ ದೀಪಕ್ ಕುಮಾರ್.
PublicNext
02/10/2022 07:03 pm