ಗುವಾಹಟಿ: ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 16 ರನ್ಗಳಿಂದ ಗೆದ್ದು ಬೀಗಿದೆ. ಇದರೊಂದಿಗೆ ಟೀಂ ಇಂಡಿಯಾ ಸರಣಿಯನ್ನು 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ.
3 ಪಂದ್ಯಗಳ ಟಿ20 ಸರಣಿಯ ಭಾಗವಾಗಿ ಇಂದು ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿತ್ತು.
ಬಳಿಕ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 3 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿ ಸೋಲು ಒಪ್ಪಿಕೊಂಡಿತು.
ಇದಕ್ಕೂ ಮುನ್ನ ಟೀಂ ಇಂಡಿಯಾ ಪರ ಕೆ.ಎಲ್.ರಾಹುಲ್ 57 ರನ್, ಸೂರ್ಯಕುಮಾರ್ ಯಾದವ್ 61 ರನ್, ವಿರಾಟ್ ಕೊಹ್ಲಿ ಅಜೇಯ 49 ರನ್, ನಾಯಕ ರೋಹಿತ್ ಶರ್ಮಾ 43 ರನ್ ಹಾಗೂ ದಿನೇಶ್ ಕಾರ್ತಿಕ್ ಅಜೇಯ 17 ರನ್ ಬಾರಿಸಿದ್ದರು. ಆದರೆ ಬೌಲಿಂಗ್ ನಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು.
PublicNext
02/10/2022 11:22 pm