ನವದೆಹಲಿ: ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಮಧ್ಯೆ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರರು ಟೂರ್ನಿಗೆ ಅಲಭ್ಯವಾಗಿದ್ದಾರೆ.
ಹೌದು. ಟೀಂ ಇಂಡಿಯಾ ಆಲ್‌ರೌಂಡರ್ ರವೀಂದ್ರ ಜಡೇಜಾ ಬಳಿಕ ಟಿ20 ವಿಶ್ವಕಪ್ ಟೂರ್ನಿಯಿಂದ ಪ್ರಮುಖ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಬೆನ್ನುಮೂಳೆ ಮುರಿತದಿಂದ ಸೌತ್ ಆಫ್ರಿಕಾ ಟೂರ್ನಿಯಿಂದ ಹೊರಬಿದ್ದ ವೇಗಿ ಜಸ್ಪ್ರೀತ್ ಬುಮ್ರಾ, ಟಿ20 ವಿಶ್ವಕಪ್ ಟೂರ್ನಿಗೆ ಲಭ್ಯತೆ ಕುರಿತು ಗೊಂದಲ ಏರ್ಪಟ್ಟಿತ್ತು. ಇದೀಗ ಬಿಸಿಸಿಐ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಗಾಯದಿಂದ ಚೇತರಿಸಿಕೊಳ್ಳಲು ಹೆಚ್ಚಿನ ವಾರಗಳ ವಿಶ್ರಾಂತಿ ಅಗತ್ಯವಿರುವ ಕಾರಣ ಜಸ್ಪ್ರೀತ್ ಬುಮ್ರಾ ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ.
PublicNext
03/10/2022 09:49 pm